JOB| ಜಿಲ್ಲಾ ಪಂಚಾಯಿತಿ ನೇಮಕಾತಿ: 12 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ಖಾಲಿ ಇರುವ 12 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎಸ್ಸಿ, ಬಿ.ಇ/ಬಿ.ಟೆಕ್‌ ವಿದ್ಯಾರ್ಹತೆ ಜೊತೆಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ನವೆಂಬರ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!