ಬೆಳಗಾವಿಯಲ್ಲಿ ಉದ್ಯೋಗಾವಕಾಶ : 36 ತಜ್ಞ ವೈದ್ಯರು ಮತ್ತು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಷ್ಟ್ರೀಯ ಆರೋಗ್ಯ ಅಭಿಯಾನದ, ವಿವಿಧ ಕಾರ್ಯಕ್ರಮದಡಿ ಬೆಳಗಾವಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 36 ವಿವಿಧ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಹುದ್ದೆಗಳ ವಿವರ :
ತಜ್ಞ ವೈದ್ಯರು – 26 ಹುದ್ದೆಗಳು
ವೈದ್ಯಾಧಿಕಾರಿಗಳು – 10 ಹುದ್ದೆಗಳು
ಒಟ್ಟು 36 ಹುದ್ದೆಗಳು

ವೇತನ :
ತಜ್ಞ ವೈದ್ಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,10,000/-ರೂ ಮತ್ತು ವೈದ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :
ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 3,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!