ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 37 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವ್ಯದಾಧಿಕಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 37 ಅರವಳಿಕೆ, ಸ್ತ್ರೀರೋಗ ಮತ್ತು ಚಿಕ್ಕ ಮಕ್ಕಳ ತಜ್ಞ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 23,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿವಿಧ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಎಂಬಿಬಿಎಸ್, ಡಿಜಿಒ/ಡಿಎನ್‌ಬಿ ಮತ್ತು ಎಂಡಿ ವಿದ್ಯಾರ್ಹತೆಯನ್ನು ಹೊಂದಿರುವವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಈ ಹುದ್ದೆಗಳಿಗೆ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ವೇತನವನ್ನು ನೀಡಲಾಗುವುದು.

ಅರವಳಿಕೆ, ಸ್ತ್ರೀರೋಗ ಮತ್ತು ಚಿಕ್ಕ ಮಕ್ಕಳ ತಜ್ಞ ವೈದ್ಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ನೇಮಕಾತಿಯ ಅರವಳಿಕೆ, ಸ್ತ್ರೀರೋಗ ಮತ್ತು ಚಿಕ್ಕ ಮಕ್ಕಳ ತಜ್ಞ ವೈದ್ಯ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 23,2022ರಂದು ಬೆಳಿಗ್ಗೆ ಆರಂಭವಾಗಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!