ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 12 ಎಂಬಿಬಿಎಸ್ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳಿಗನುಸಾರ ಎಂಬಿಬಿಎಸ್, ಡಿಪ್ಲೋಮಾ, ಬಿ.ಎಸ್ಸಿ, ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,542/- ರಿಂದ 43,142/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಆಗಸ್ಟ್ 18,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.