Saturday, February 4, 2023

Latest Posts

ಪಾರ್ಟಿಯೊಂದರಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ ಧೋನಿ, ಪಾಂಡ್ಯ: ವಿಡಿಯೋ ವೈರಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಆಲ್​ರೌಂಡರ್ ಹಾರ್ದಿಕ್​ ಪಾಂಡ್ಯಾ ಪಾರ್ಟಿಯೊಂದರಲ್ಲಿ ಭರ್ಜರಿ ಸ್ಟೆಪ್ ಹಾಕಿದ್ದು, ಸಖತ್ ಎಂಜಾಯ್ ಮಾಡಿದ್ದಾರೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕ್ರಿಕೆಟ್​ನಿಂದ ದೂರವಿದ್ದು, ತಮ್ಮ ಉದ್ಯಮ, ಹವ್ಯಾಸ ಹಾಗೂ ಕುಟುಂಬದೊಂದಿಗೆ ಕಾಲ ಕಳೆಯುತ್ತಿ ಧೋನಿ, ಖಾಸಗಿ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇದೇ ಪಾರ್ಟಿಯಲ್ಲಿ ಹಾರ್ದಿಕ್ ಪಾಂಡ್ಯಾ ಕೂಡಾ ಭಾಗವಹಿಸಿದ್ದರು.

ಈ ವೈರಲ್ ಆಗಿರುವ ವಿಡಿಯೋದಲ್ಲಿ ಬರ್ಥ್​​​ಡೇ ಪಾರ್ಟಿಯೊಂದರಲ್ಲಿ ಧೋನಿ ಹಾಗೂ ಹಾರ್ದಿಕ್ ಪಾಂಡ್ಯಾ, ರ‍್ಯಾಪರ್ ಗಾಲಾ ಅವರ ಹಾಡಿಗೆ ಒಟ್ಟಾಗಿ ಹೆಜ್ಜೆ ಹಾಕಿದ್ದಾರೆ. ಧೋನಿ ಜತೆಗೆ ಪತ್ನಿ ಸಾಕ್ಷಿ ಕೂಡ ಹೆಜ್ಜೆ ಹಾಕಿದ್ದಾರೆ. ಕ್ರಿಕೆಟಿಗರಾದ ಕೃನಾಲ್ ಪಾಂಡ್ಯಾ ಹಾಗೂ ಇಶಾನ್ ಕಿಶನ್ ಕೂಡಾ ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!