ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಜಗತ್ತಿನಿಂದ ದೂರ ಉಳಿದ ಬಳಿಕ ನಾನಾ ವಿಚಾರಗಳಲ್ಲಿ ಸುದ್ದಿಯಲ್ಲಿರುತ್ತಾರೆ.
ಸಿನಿಮಾ ನಿರ್ಮಾಣ ಮಾಡ್ತಾರೆ ಎಂದು ಹೇಳಲಾಗುತ್ತಿದ್ದು, ಇದೀಗ ರಾಜಕಿಯಾಗೆ ಸೇರ್ತಾರಾ ಎಂಬ ಪ್ರಶ್ನೆ ಕಾಡಿದೆ.
ಮಹೇಂದ್ರ ಸಿಂಗ್ ಧೋನಿ ಸಮಾರಂಭವೊಂದರಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಬ್ಬರೂ ಹಸ್ತಲಾಘವ ಮಾಡಿಕೊಂಡಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗುತ್ತಿದ್ದಂತೆ ಸಾಕಷ್ಟು ವೈರಲ್ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು, ಧೋನಿ ಬಿಜೆಪಿಗೆ ಸೇರಲಿದ್ದಾರೆ ಎಂದು ಮಾತನಾಡಿಕೊಂಡಿದ್ದಾರೆ.
ಚೆನ್ನೈ ಮೂಲದ ಸಿಮೆಂಟ್ ಕಂಪೆನಿಗೆ 75 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಸಂಭ್ರಮದ ಕಾರ್ಯಕ್ರಮವನ್ನು ಕಂಪೆನಿ ಆಯೋಜಿಸಿತ್ತು. ಈ ಸಮಾರಂಭಕ್ಕೆ ಧೋನಿ ಆಗಮಿಸಿದ್ದರು. ಕಳೆದ ಅನೇಕ ವರ್ಷಗಳಿಂದ ಧೋನಿ ಈ ಸಿಮೆಂಟ್ ಕಂಪೆನಿಯ ರಾಯಭಾರಿ. ಹೀಗಾಗಿ ಧೋನಿ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿ ತೋರಿಸಿದ್ದರು.
ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಗೃಹಮಂತ್ರಿ ಅಮಿತ್ ಷಾ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಇಬ್ಬರೂ ಪರಸ್ಪರ ಮಾತನಾಡಿಕೊಂಡಿದ್ದಾರೆ.