ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಮುಖಂಡರ ನಡುವೆ ವಾಗ್ದಾಳಿ, ವ್ಯಂಗ್ಯ, ಆರೋಪ, ಪ್ರತ್ಯಾರೋಪ, ಪಕ್ಷಾಂತರ ನಡೆದಿದೆ.
ಉದಾಹರಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಗೆದ್ದರೆ ದೇಶದಲ್ಲಿ ನಿರಂಕುಶ ಪ್ರಭುತ್ವ ಹೇರಲಾಗುವುದು ಎಂದರು.
ಒಡಿಶಾದ ಭುವನೇಶ್ವರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಕಾಪಾಡಲು ದೇಶದ ಜನರಿಗೆ ಇದು ಕೊನೆಯ ಅವಕಾಶವಾಗಿದೆ. ದೇಶದ ಮೇಲೆ ಸರ್ವಾಧಿಕಾರ ಹೇರುತ್ತಿದ್ದಾರೆ. ವ್ಲಾಡಿಮಿರ್ ಪುಟಿನ್ ರಷ್ಯಾವನ್ನು ಆಳಿದಂತೆಯೇ ಭಾರತವನ್ನು ಬಿಜೆಪಿ ಆಳುತ್ತದೆ. ಮೋದಿ ಮತ್ತೊಮ್ಮೆ ಗೆದ್ದರೆ 2024ರ ನಂತರ ಯಾವುದೇ ಚುನಾವಣೆ ನಡೆಯುವುದಿಲ್ಲ ಎಂದರು.