Friday, December 5, 2025

ಬೆಂಗಳೂರಿನ ಪಬ್‌ನಲ್ಲಿ ದುರ್ವರ್ತನೆ ತೋರಿದ್ರಾ ಆರ್ಯನ್‌ ಖಾನ್‌? ತನಿಖೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅಸಭ್ಯವಾಗಿ ಸನ್ನೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿಗೆ ದಿಢೀರ್ ಭೇಟಿ ನೀಡುವ ಮೂಲಕ ಇಲ್ಲಿನ ಸಿನಿಪ್ರಿಯರಲ್ಲಿ ಮತ್ತು ಪಾರ್ಟಿ ಪ್ರಿಯರಲ್ಲಿ ಸಂಚಲನ ಮೂಡಿಸಿದ್ರು. ಆದರೆ ಈ ವೇಳೆ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ ತೋರಿಸಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಸಂಬಂಧ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಪಬ್ ಮ್ಯಾನೇಜರ್‌ಅನ್ನು ಒಂದು ಗಂಟೆ ಕಾಲ ವಿಚಾರಣೆ ನಡೆಸಿ, ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಗೆ ಕಾರಣ ಏನು? ದುರ್ವರ್ತನೆಗೆ ಏನು ಕಾರಣ? ಏಕಾಏಕಿ ಜನರನ್ನ ಕಂಡು ದುರ್ವರ್ತನೆ ತೋರಿದ್ಯಾಕೆ? ಜನ ಕೂಗಿದ್ದಕ್ಕೆ ದುರ್ವರ್ತನೆ ತೋರಿದ್ದಾ? ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಆದರೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ದುರ್ವರ್ತನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ನ.28ರಂದು ಮುಂಬೈನಿಂದ ಬೆಂಗಳೂರಿಗೆ ಬಂದಿಳಿದ ಆರ್ಯನ್ ಖಾನ್‌ಗೆ ಅದ್ಧೂರಿ ಸ್ವಾಗತವೇ ಸಿಕ್ಕಿತ್ತು. ನಗರದ ಪ್ರಮುಖ ಮತ್ತು ಜನಪ್ರಿಯ ನೈಟ್ ಸ್ಪಾಟ್ ಒಂದಕ್ಕೆ ವಿಶೇಷ ಅತಿಥಿಯಾಗಿ ಆರ್ಯನ್ ಆಗಮಿಸಿದ್ದರು. ಮೂಲಗಳ ಪ್ರಕಾರ, ಆರ್ಯನ್ ಖಾನ್ ರಾತ್ರಿ ಸರಿಯಾಗಿ 11 ಗಂಟೆಗೆ ಎಂಟ್ರಿ ಕೊಟ್ಟರು. ಸುಮಾರು 12:45ರವರೆಗೂ ಅಂದರೆ ನಡುರಾತ್ರಿಯವರೆಗೂ ಅಲ್ಲೇ ಇದ್ದು, ಬೆಂಗಳೂರಿನ ನೈಟ್ ಲೈಫ್ ಅನ್ನು ಸವಿದಿದ್ದರು. ಇದೇ ವೇಳೆ ಪಬ್‌ನ ಬಾಲ್ಕನಿಯಲ್ಲಿ ನಿಂತು ಫ್ಯಾನ್ಸ್ನತ್ತ ಆರ್ಯನ್ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ತೋರಿದ್ದರು ಎನ್ನಲಾಗಿದೆ.

error: Content is protected !!