ಸಂಘರ್ಷ ಹುಟ್ಟುಹಾಕಿದ್ದೇ ಸಿಎಂ ಸಿದ್ದರಾಮಯ್ಯ ಸಾಧನೆ : ಕೆ.ಎಸ್.ಈಶ್ವರಪ್ಪ

ಹೊಸದಿಗಂತ ವರದಿ ಶಿವಮೊಗ್ಗ;

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ಜಾತಿ ನಾಯಕ ಎಂದು ಘೋಷಣೆ ಮಾಡಿಕೊಂಡು ಸಮಾಜದಲ್ಲಿ  ಸಂಘರ್ಷ ಹುಟ್ಟು ಹಾಕಿದ್ದೇ ಸಾಧನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ತಾನು ಹಿಂದುಳಿದ, ದಲಿತ ನಾಯಕ ಅಂತ ಘೋಷಣೆ ಮಾಡಿಕೊಂಡಿದ್ದಾರೆ. ಆದರೆ ಜಾತಿ ಗಣತಿ ವರದಿ ಸಿದ್ಧ ಇದ್ದರೂ ಬಿಡುಗಡೆ ಮಾಡಿಲ್ಲ. ಹಿಂದುಳಿದ ವರ್ಗಗಳ ಅಯೋಗದ ಅ‘್ಯಕ್ಷ ಜಯಪ್ರಕಾಶ್ ಹೆಗಡೆ ಮುಖ್ಯಮಂತ್ರಿಗಳು ಯಾವಾಗ ಕೇಳಿದರೂ ವರದಿ ಕೊಡುತ್ತೇನೆ ಎಂದಿದ್ದಾರೆ.  ಮೊದಲು ವರದಿ ಸ್ವೀಕಾರ ಮಾಡಲಿ ಎಂದು ಸಲಹೆ ನೀಡಿದರು.

ಜಾತಿ ಗಣತಿ ಹಿನ್ನೆಲೆಯಲ್ಲಿ ಲಿಂಗಾಯತರು ಸಮ್ಮೇಳನವನ್ನೇ ಮಾಡಿದರು. ಒಕ್ಕಲಿಗರು ಸಹಿ ಸಂಗ್ರಹ ಮಾಡಿದ್ದಾರೆ. ಹೀಗೆ ಸಿದ್ದರಾಮಯ್ಯ ಇಡೀ ಹಿಂದೂ ಸಮಾಜದಲ್ಲಿ ಸಂಘರ್ಷ ಹುಟ್ಟು ಹಾಕಿದ್ದಾರೆ. ಈಗ ತಮ್ಮ ಹಿಂಬಾಲಕರ ಮೂಲಕ ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೆ. ಇದು ವೋಟಿಗಾ? ನಿಮ್ಮ ನಿಲುವೇನು? ಸರ್ಕಾರದ ನಿಲುವೇನು?  ಎಂದು ಪ್ರಶ್ನಿಸಿದರು.

ಜಾತಿ ಗಣತಿ ಸಿದ್ಧವಾಗಿ ಒಂಬತ್ತು ವರ್ಷ ಆಗಿದೆ. ಜಾತಿಗಣತಿ ವೈಜ್ಞಾನಿಕವಾಗಿ ಆಗಬೇಕು ಎಂಬುದು ಹಲವರ ಬೇಡಿಕೆ. ಜಯಪ್ರಕಾಶ್ ಹೆಗಡೆ ವರದಿ ರೆಡಿ ಇದೆ ಅಂದಾಗ ಸಿದ್ದರಾಮಯ್ಯ ತಗೊಬೇಕಿತ್ತು. ಚರ್ಚೆಗೆ ಬಿಡಬೇಕಿತ್ತು ಎಂದು ಕಿವಿಮಾತು ಹೇಳಿದರು.

ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ರಮೇಶ್, ಚಂದ್ರಶೇಖರ್, ಶಿವರಾಜ್ ಸುದ್ದಿಗೋಷ್ಟಿಯಲ್ಲಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!