ವಿಮಾನದಲ್ಲಿ ಆಸಿಡ್‌ ಕುಡಿದ್ರಾ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌ ವಿಮಾನದಲ್ಲಿ ಸೀಟಿನ ಮುಂಭಾಗ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನೀರು ಕುಡಿಯುತ್ತಿದ್ದಂತೆ ಮಯಾಂಕ್‌ ನಾಲಿಗೆ, ಬಾಯಿಗೆ ಸುಟ್ಟ ಅನುಭವವಾಗಿದೆ. ಪರಿಣಾಮ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಅಗರ್ತಲಾದ ಐಎಲ್‌ಎಸ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಯಿತು.

ಕರ್ನಾಟಕ ರಣಜಿ ತಂಡದೊಂದಿಗೆ ಸೂರತ್‌ಗೆ ವಿಮಾನದಲ್ಲಿ ಪ್ರಯಾಣ ನಡೆಸುವ ವೇಳೆ ಈ ಘಟನೆ ಸಂಭವಿಸಿದೆ. ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಪ್ರಯಾಣ ಮಾಡುವಾಗ ಈ ಘಟನೆ ನಡೆದಿದೆ. ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ವಿಮಾನದಲ್ಲಿ ಕುಳಿತಿದ್ದ ಮಯಾಂಕ್‌ ಅಗರ್ವಾಲ್‌ ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದಿದ್ದರು. ನೀರು ಕುಡಿಯುತಿದ್ದಂತೆ ನಾಲಿಗೆ, ಬಾಯಿ, ಕೆನ್ನೆ ಸುಟ್ಟು ಹೋದ ಅನುಭವವಾಗಿದೆ. ಮಾತಾಡಲು ಸಾಧ್ಯವಾಗದೆ ಮಯಾಂಕ್‌ ಅಗರ್ವಾಲ್‌ ಸೀಟ್‌ನಲ್ಲಿಯೇ ಒರಗಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಅಗರ್ತಲಾದ ಐಎಲ್‌ಎಸ್‌ ಆಸ್ಪತ್ರೆಗೆ ಮಯಾಂಕ್ ಶಿಫ್ಟ್ ಮಾಡಲಾಗಿದೆ.

ಇನ್ನೊಂದೆಡೆ ವಿಮಾನದ ಸಿಬ್ಬಂದಿಗಳು ನೀರಿನ ಬಾಟಲ್‌ಅನ್ನು ವಶಕ್ಕೆ ಪಡೆದುಕೊಂಡು, ಅದರ ತನಿಖೆ ಆರಂಭಿಸಿದ್ದಾರೆ. ಕರ್ನಾಟಕ ರಣಜಿ ತಂಡವಾಗಲಿ, ವಿಮಾನದ ಸಿಬ್ಬಂದಿಯಾಗಲಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಸದ್ಯದ ಮಾಹಿತಿಯ ಪ್ರಕಾರ ವಿಮಾನದ ಸಿಬ್ಬಂದಿ ನೀರಿನ ಬಾಟಲಿ ಇಡುವ ಜಾಗದಲ್ಲಿ ಆಸಿಡ್‌ ಇಟ್ಟಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!