October 16, 2026
Friday, October 16, 2026
spot_img

ರಾಷ್ಟ್ರ ರಾಜಧಾನಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ರಾ ಡಿಕೆಶಿ? ಈ ಕುರಿತು ಡಿಸಿಎಂ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಡಿಸಿಎಂ ಡಿ.ಕೆ. ಶಿವಕುಮಾರ್ ಸದ್ಯ ರಾಷ್ಟ್ರರಾಜಧಾನಿ ದೆಹಲಿಯಲ್ಲಿದ್ದು, ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿ ನಡೆಸುವ ಸಾಧ್ಯತೆ ಇದೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ತಿಳಿಸಿದರು.

ಪುಣೆಯಲ್ಲಿರುವ ನನ್ನ ಸ್ನೇಹಿತರ ಮನೆ ಮದುವೆ ಕಾರ್ಯಕ್ರಮವಿತ್ತು. ಹೀಗಾಗಿ ನಿನ್ನೆ ದೆಹಲಿಗೆ ಬಂದಿದ್ದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ ಎಂದು ಹೇಳಿದರು.

ದೆಹಲಿ ಭೇಟಿ ಎಂದರೆ ವಿಭಿನ್ನ ಚರ್ಚೆಗಳೇ ಸಾಗುತ್ತವೆ ಎಂದು ಕೇಳಿದಾಗ, ‘ಯಾವ ವಿಭಿನ್ನ ಚರ್ಚೆನೂ ಬೇಡ. ನಾಳೆ (ಮಂಗಳವಾರ) ಭೋಜನಕೂಟವಿದೆ, ನಾಡಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ’ ಎಂದರು.

Must Read