ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಇಸ್ರೇಲ್‌ನ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.
ಆದಾಗ್ಯೂ, ಈ ಹೇಳಿಕೆಗೆ ಸಂಬಂಧಿಸಿದಂತೆ ಇಸ್ರೇಲಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.
ಇಸ್ರೇಲ್ ಪ್ರಮುಖ ಚಾನೆಲ್ ಗಳು ವರದಿ ಮಾಡಿದ್ದು, ಟೆಹ್ರಾನ್‌ನಲ್ಲಿರುವ ಖಮೇನಿ ಅವರ ರಹಸ್ಯ ಬಂಕರ್ ಹಾಗೂ ಕಚೇರಿಯನ್ನೇ ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದ್ದು, ಈ ವೇಳೆ ಖಮೇನಿ ಅಲ್ಲಿಯೇ ಇದ್ದರು ಎನ್ನಲಾಗಿದೆ.
ಏತನ್ಮಧ್ಯೆ, ಈ ಕುರಿತು ಟೆಹ್ರಾನ್‌ನಿಂದ ಕೂಡ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.



