ಕೆಟ್ಟ ಸಂದರ್ಭ ಬಂದಾಗ ಮೋದಿ, ಎಚ್‌ಡಿಕೆ ರಾಜೀನಾಮೆ ಕೊಟ್ಟಿದ್ರಾ? : ಸಿಎಂ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣ ಸಂಬಂಧ ಮೈಸೂರು ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗುವ ಸಾಧ್ಯತೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ  ಮೈಸೂರಿನಲ್ಲಿ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೂಗು ಕೇಳಿಬರುತ್ತಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜಭವನ ದುರ್ಬಳಕೆಯಾಗುತ್ತಿದೆ. ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ. ನಾನು ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸ್ಪಷ್ಟನೆ ನೀಡಿದರು. ರಾಜ್ಯದ ಜನರು ನಮಗೆ ೫ ವರ್ಷ ಅಧಿಕಾರ ನಡೆಸಿ ಅಭಿವೃದ್ದಿ ಮಾಡಿ ಎಂದು ಅವಕಾಶ ನೀಡಿದ್ದಾರೆ .ಕೇಂದ್ರ ಸರ್ಕಾರ ರಾಜಭವನವನ್ನ ಹಾಗೂ ಎಲ್ಲಾ ಕಡೆ ಸಿಬಿಐ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ನಾನು ಯಾಕೆ ರಾಜೀನಾಮೆ ಕೊಡಬೇಕು. ತಪ್ಪು ಮಾಡಿದ್ದರೇ ಮಾತ್ರ ರಾಜೀನಾಮೆ ಕೊಡಬೇಕು . ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ ಎಫ್ ಐಆರ್ ಆಗಿ ಜಾಮೀನು ಪಡೆದಿರುವ ಹೆಚ್ಡಿಕೆ ಯಾಕೆ ರಾಜೀನಾಮೆ ಕೊಟ್ಟಿಲ್ಲ. ನಾನು ತಪ್ಪು ಮಾಡಿಲ್ಲ. ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವ ನೈತಿಕತೆ ಅವರಿಗಿದೆಯಾ ಎಂದು ಪ್ರಶ್ನಿಸಿದರು. ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಇಲ್ಲವೇ ಇಲ್ಲ ಎಂದರು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ಯಾಕೆ ರಾಜೀನಾಮೆ ಕೊಡಬೇಕು. ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರಾ? ಅವರಿಗೆ ಯಾವ ನೈತಿಕತೆ ಇದೆ ಎಂದು ಹೇಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!