ಚುನಾವಣಾ ಪ್ರಚಾರದಲ್ಲಿ ಮೊದಲ ಬಾರಿ ವೇದಿಕೆ ಹಂಚಿಕೊಳ್ಳಿದ್ದಾರೆಯೇ ನಮೋ-ಗೌಡರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೊತೆ ಇದೇ ಮೊದಲಬಾರಿಗೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆಗಳಿದ್ದು, ಈ ಅಪರೂಪದ ಕ್ಷಣಗಳನ್ನು ಕಾಣಲು ಎರಡೂ ಪಕ್ಷದ ಕಾರ್ಯಕರ್ತರು ಹಾಗೂ ನಮೋ, ಗೌಡರ ಅಭಿಮಾನಿಗಳು ಕಾತರರಾಗಿದ್ದಾರೆ.

ಏ.14 ರಂದು ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ದೇವೇಗೌಡರ ಉಪಸ್ಥಿತಿ ಕೂಡಾ ಇರುವ ಸಾಧ್ಯತೆ ಹೆಚ್ಚಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮೈಸೂರಿನಲ್ಲಿ ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!