ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಅದ್ಧೂರಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ಸಿಕ್ಕಿದೆ. ಆದರೆ ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ. ಪ್ರಾಣ ಪ್ರತಿಷ್ಠಾಪನೆ ಮುಗಿದ ನಂತರ ಬಿಡುವು ಮಾಡಿಕೊಂಡು ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶರದ್ ಪವಾರ್ ಪತ್ರ ಬರೆದಿದ್ದಾರೆ.
ಐಎನ್‌ಡಿಐಎ ಮೈತ್ರಿಕೂಟದ ಮಿತ್ರ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸುತ್ತೇವೆ ಎಂದು ಕಾಂಗ್ರೆಸ್ ಕೂಡ ಹೇಳಿದೆ.