ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಸಮಂತಾ ರುತ್ ಪ್ರಭು ಮಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆ ಪಡೆಯಲು ಈ ಮೊದಲು ಸಮಂತಾ ವಿದೇಶಕ್ಕೆ ಹಾರಿದ್ದರು. ಆದರೆ ಕಾಯಿಲೆ ಸ್ವಲ್ಪವೂ ಗುಣಮುಖವಾಗದ ಕಾರಣ ಇದೀಗ ದಕ್ಷಿಣ ಕೊರಿಯಾಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.
ವಿದೇಶದಿಂದ ವಾಪಾಸಾದ ಬಳಿಕ ಯಶೋದ ಸಿನಿಮಾದ ಡಬ್ಬಿಂಗ್ ಕೂಡ ಮುಗಿಸಿದ್ದರು. ಆದರೆ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಕಾಣದೆ ಇದೀಗ ಹೆಚ್ಚಿನ ಚಿಕಿತ್ಸೆಗೆ ದಕ್ಷಿಣ ಕೊರಿಯಾಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.