ವೈಟ್ನರ್‌ ಹಿಂದಿರುವ ಸತ್ಯ ಬಿಚ್ಚಿಟ್ಟು ತಮ್ಮ ಖೆಡ್ಡಾ ತಾವೇ ತೋಡಿಕೊಂಡರಾ ಸಿದ್ದು!?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗುತ್ತಿರುವ ಮುಡಾ ಹಗರಣ ಸರ್ಕಾರವನ್ನು ಬೆಚ್ಚಿ ಬೀಳಿಸಿದೆ. ಆದರೆ, ಸಿದ್ದರಾಮಯ್ಯ ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಮುಡಾ ದಾಖಲೆ ತಿದ್ದುಪಡಿಗೆ ವೈಟ್ನರ್‌ ಬಳಕೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಬಿಜೆಪಿ-ಜೆಡಿಎಸ್ ನಾಯಕರ ಟೀಕೆಗೆ ಸಿದ್ದರಾಮಯ್ಯ ಈಗ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಕಿಡಿಕಾರಿದ್ದಾರೆ.

ನೀವು ವೈಟ್ನರ್‌ ಬಳಸಿದರೂ ಕಪ್ಪು ಕಲೆಗಳನ್ನು ಹೋಗಲಾಡಿಸಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!