ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪಹಲ್ಗಾಮ್ ಅಟ್ಯಾಕ್ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದರು. ಈ ಪೋಸ್ಟ್‌ನಿಂದಾಗಿ ಗೌತಮ್ ಗಂಭೀರ್‌ಗೆ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದೆ.
“ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.
ಗೌತಮ್ ಗಂಭೀರ್ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಯನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ ನಗರ ಠಾಣೆ ಅಧಿಕಾರಿ ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಗಂಭೀರ್‌ಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿದ್ದವು. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿತ್ತು. ಎರಡೂ ಸಂದೇಶಗಳಲ್ಲೂ ಐ ಕಿಲ್ಲ್ ಯು ಎಂದು ಬರೆಯಲಾಗಿತ್ತು. ಈ ಬೆದರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗೌತಮ್ ಗಂಭೀರ್ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.