March 22, 2026
Sunday, March 22, 2026
spot_img

ಲಂಚದ ಆರೋಪ ಉಲ್ಟಾ ಹೊಡೆಯಿತೇ? ಮುಡಾ ಹೋರಾಟಗಾರ ಸ್ನೇಹಮಯಿ ಕೃಷ್ಣ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣವನ್ನು ಬೆಳಕಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಇಂದು ಬಂಧಿಸಿದ್ದಾರೆ.

ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ಅವರು ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನಟೇಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ 1.5 ಕೋಟಿ ರೂ. ಲಂಚ ನೀಡಿ ಮುಂಬಡ್ತಿ ಪಡೆದಿದ್ದಾರೆ ಎಂದು ಕೃಷ್ಣ ಆರೋಪಿಸಿದ್ದರು.

ತಮ್ಮ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪ ಮಾಡಿ ಮಾನಹಾನಿ ಮಾಡಲಾಗಿದೆ ಎಂದು ಡಿ.ಬಿ. ನಟೇಶ್ ಅವರು ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ತನಿಖೆ ನಡೆಸಿದ ಸೈಬರ್ ಪೊಲೀಸರು, ಇಂದು ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !