ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುತ್ರ ಅರುಣ್ ರಾಜಕೀಯ ಪ್ರವೇಶದ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ಸುಳಿವು ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅರುಣ್ ರಾಜಕೀಯ ಪ್ರವೇಶ ಮಾಡುತ್ತಾರೆ. ಮುಂದೆ ಅವರಿಗೂ ಒಳ್ಳೆಯ ಭವಿಷ್ಯ ಸಿಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅವರು, ಅವರ ರಾಜಕೀಯ ಪ್ರವೇಶ ಆಗಿಯೇ ಆಗುತ್ತದೆ. ಬೆಂಗಳೂರೋ, ತುಮಕೂರೋ ಎಲ್ಲಿಂದ ರಾಜಕೀಯ ಪ್ರವೇಶ ಮಾಡುತ್ತಾರೆ ಗೊತ್ತಿಲ್ಲ. ಅದನ್ನೆಲ್ಲ ಪಕ್ಷ ಗಮನಿಸುತ್ತದೆ, ಪಕ್ಷ ತೀರ್ಮಾನ ಮಾಡುತ್ತದೆ ಎಂದು ಪುತ್ರನ ಹುಟ್ಟುಹಬ್ಬದ ದಿನವೇ ರಾಜಕೀಯ ಪ್ರವೇಶದ ಸಂದೇಶ ನೀಡಿದ್ದಾರೆ.