ಹಾಜರಾತಿ ಕೊರತೆಯಿಂದ ಪರೀಕ್ಷೆ ಮಿಸ್ ಆಯ್ತಾ?: ಹಾಗಿದ್ರೆ ಇಲ್ಲಿದೆ ನಿಮಗೆ ಮತ್ತೊಂದು ಚಾನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತರಗತಿ ಅವಧಿಯಲ್ಲಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾಗಿದ್ದ ಕಲಾ ಮತ್ತು ವಾಣಿಜ್ಯ ವಿಭಾಗದ 12,385 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.

2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ತರಗತಿ ವಿದ್ಯಾರ್ಥಿಗಳಾಗಿ ನೋಂದಣಿ ಮಾಡಿಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳು ಹಾಜರಾತಿ ಕೊರತೆಯಿಂದ ಕಳೆದ ಮಾರ್ಚ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ಅರ್ಹತೆ ಕಳೆದುಕೊಂಡಿದ್ದರು.

ಇದೀಗ ಇಂತಹ ಮಕ್ಕಳ ಪೈಕಿ ಕಲಾ ವಿಭಾಗದಲ್ಲಿ 7,985 ಮತ್ತು ವಾಣಿಜ್ಯ ವಿಭಾಗದಲ್ಲಿ 4400 ಮಕ್ಕಳಿಗೆ ಇದೇ ಮೇ 23ರಿಂದ ನಡೆಯುವ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಆಸಕ್ತರು ಮೇ 20ರೊಳಗೆ ತಮ್ಮ ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು ಮಂಡಳಿ ಅಧ್ಯಕ್ಷ ಆರ್.ರಾಮಚಂದ್ರನ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!