ಉಗ್ರ ಸಂಹಾರದ ನಡುವೆ ‘ಶಾಂತಿ’ ಪಾಠ ಪಠಣ: ನೆಟ್ಟಿಗರ ಸಿಟ್ಟಿಗೆ ಕರ್ನಾಟಕ ಕಾಂಗ್ರೆಸ್ ಯೂ ಟರ್ನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಉಗ್ರರ ಶಿಬಿರಗಳಿಗೆ ನುಗ್ಗಿ ಹೊಡೆಯುತ್ತಿದ್ದರೆ ಇತ್ತ ಕರ್ನಾಟಕ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಹಂಚಿಕೊಂಡು ಎಡವಟ್ಟು ಮಾಡಿಕೊಂಡಿದ್ದು, ನೆಟ್ಟಿಗರ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟ್ ಅಳಿಸಿ ಮತ್ತೊಂದು ಪೋಸ್ಟ್ ಹಂಚಿಕೊಂಡು ನಾವು ಸರ್ಕಾರ ಸೇನೆಯ ಪರವಾಗಿದ್ದೇವೆ ಎಂದು ಹೇಳಿದೆ.

ಆಪರೇಷನ್ ಸಿಂಧೂರಕ್ಕೆ ದೇಶಕ್ಕೆ ದೇಶವೇ ಹೆಮ್ಮೆಪಡುತ್ತಿದ್ದರೆ ಎಕ್ಸ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್, ‘ಮಹಾತ್ಮ ಗಾಂಧಿ ಅವರ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂಬ ಪೋಸ್ಟ್ ಹಾಕಿತ್ತು. ಇದರ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಕೆಲವೇ ಕ್ಷಣಗಳಲ್ಲಿ ಪೋಸ್ಟ್ ಅಳಿಸಲಾಗಿದ್ದು, ಹೊಸ ಪೋಸ್ಟ್ ಹಂಚಿಕೊಳ್ಳಲಾಗಿದೆ.

ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದೆಂದು ಗುರುತಿಸಲ್ಪಟ್ಟ ಭಾರತೀಯ ವಾಯುಪಡೆ ಹೇಡಿತನದ ಪಹಲ್ಗಾಮ್ ದಾಳಿಗೆ ತಕ್ಕ ಉತ್ತರ ನೀಡಿದೆ. ಈ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here