Wednesday, June 29, 2022

Latest Posts

ಪಶ್ಚಿಮ ಬಂಗಾಳದಲ್ಲಿ ಮತ್ತೆ ದೀದಿ ಗದ್ದುಗೆಗೆ: ಶುಭಾಶಯ ಕೋರಿದ ರಾಜ್​ನಾಥ್​ ಸಿಂಗ್,ನಿರ್ಮಲಾ ಸೀತಾರಾಮನ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷ ಮತ್ತೆ ಅದಿಕಾರದ ಚುಕ್ಕಾಣಿ ಹಿಡಿದಿದ್ದು, ಈ ಸಮಯದಲ್ಲಿ ಪ್ರಮುಖ ಪ್ರತಿಸ್ಪರ್ಧಿಯಾದ ಬಿಜೆಪಿಯ ಹಿರಿಯ ನಾಯಕರಾದ ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್​ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೀದಿಗೆ ಗೆಲುವಿನ ಶುಭಾಶಯ ಕೋರಿದ್ದಾರೆ.
ಬ್ಯಾನರ್ಜಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದ ಮೊದಲ ಬಿಜೆಪಿ ನಾಯಕರಾದ ರಾಜ್​ನಾಥ್​ ಸಿಂಗ್, ‘ಬಂಗಾಳದ ಸಿಎಂ ದೀದಿಗೆ ಅವರ ಪಕ್ಷದ ಗೆಲುವಿನ ಶುಭಾಶಯಗಳು. ಅವರ ಮುಂದಿನ ಅಧಿಕಾರಾವಧಿಗೆ ನನ್ನ ಹಾರೈಕೆಗಳು’ ಎಂದು ಬರೆದಿದ್ದಾರೆ.
ಮತ್ತೊಂದು ಟ್ವೀಟ್​​ನಲ್ಲಿ ಸಿಂಗ್​ ಅವರು ಕೇರಳದಲ್ಲಿ ಎಲ್​ಡಿಎಫ್​ ಪುನಃ ಗೆಲುವು ಸಾಧಿಸಿದ್ದಕ್ಕೆ ಸಿಎಂ ಪಿಣರಾಯಿ ವಿಜಯನ್​ ಅವರಿಗೂ ಶುಭಾಶಯ ಕೋರಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಮತಾ ಬ್ಯಾನರ್ಜಿ, ತಮಿಳುನಾಡಿನಲ್ಲಿ ಗೆಲುವು ಪಡೆದ ಡಿಎಂಕೆಯ ಎಂ.ಕೆ.ಸ್ಟಾಲಿನ್ ಮತ್ತು ಕೇರಳದ ವಿಜಯನ್ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss