September 24, 2026
Thursday, September 24, 2026
spot_img

ದೀದಿ, ನೀವು ಸೋತಿಲ್ಲ: ಮಮತಾ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ ಅಖಿಲೇಶ್ ಯಾದವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಇಂದು ಉತ್ತರ ಪದೇಶ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ.

ನಿವಾಸಕ್ಕೆ ಆಗಮಿಸಿದ ಅಖಿಲೇಶ್ ಯಾದವ್ ಅವರನ್ನು ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸ್ವಾಗತಿಸಿದರು. ಈ ವೇಳೆ ಉಭಯ ನಾಯಕರು ಶುಭಾಶಯ ವಿನಿಮಯ ಮಾಡಿಕೊಂಡು ಚುನಾವಣೆ ಕುರಿತು ಚರ್ಚೆ ನಡೆಸಿದರು.

ಈ ವೇಳೆ ದೀದಿ, ನೀವು ಸೋತಿಲ್ಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರಿಗೆ ಅಖಿಲೇಶ್ ಧೈರ್ಯ ತುಂಬಿದರು. ಅಭಿಷೇಕ್ ಬ್ಯಾನರ್ಜಿಗೆ ಶ್ಲಾಘನೀಯ ಯುದ್ಧ ಮಾಡಿದ್ದೀರಿ ಮೆಚ್ಚುಗೆ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !