ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಬೆಡಗಿ ಪೂಜಾ ಹೆಗ್ಡೆ ಸಾಲು ಸಾಲು ಸಿನಿಮಾಗಳ ಸೋಲನ್ನು ಕಂಡಿರುವ ಹಿನ್ನೆಲೆ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.
ಹೊಸ ಬಗೆಯ ಪಾತ್ರಗಳನ್ನು ಮಾಡಲು ಮುಂದಾಗಿದ್ದಾರೆ. ತಮಿಳಿನ ಹೊಸ ಸಿನಿಮಾದಲ್ಲಿ ದೆವ್ವದ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೂಜಾಗೆ ಕೆರಿಯರ್‌ನಲ್ಲಿ ಹೇಳಿಕೊಳ್ಳುವಂತಹ ಸಕ್ಸಸ್ ಸಿಗುತ್ತಿಲ್ಲ. ಆದರೆ ಅವರಿಗೆ ಬೇಡಿಕೆಯೇನು ಕಮ್ಮಿಯಾಗಿಲ್ಲ. ಬಾಲಿವುಡ್ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಖ್ಯಾತ ನಟ ರಾಘವ್ ಲಾರೆನ್ಸ್ ನಟನೆಯ ‘ಕಾಂಚನಾ ಪಾರ್ಟ್ 4’ನಲ್ಲಿ ದೆವ್ವದ ಪಾತ್ರದಲ್ಲಿ ನಟಿಸಲು ಚಿತ್ರತಂಡ ನಟಿಯನ್ನು ಕೇಳಲಾಗಿದೆಯಂತೆ. ಈಗಾಗಲೇ ಒಂದು ಹಂತದ ಮಾತುಕತೆ ನಡೆದಿದೆ. ಆದರೆ ನಟಿ ಒಪ್ಪಿಕೊಂಡ್ರಾ? ಎಂಬುದರ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದೆ.