ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಳು ವರ್ಷದ ಮಗುವೊಂದನ್ನು ಕಾನೂನು ಬಾಹಿರವಾಗಿ ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಸ್ಪರ್ಧಿ ಸೋನು ಗೌಡಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೀಗ ಸೋನು ಗೌಡ ಈ ಬಗ್ಗೆ ಮಾತನಾಡಿದ್ದು, ಮಗುವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎನ್ನುವ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಇದ್ದಿದ್ದರೆ ಕಾನೂನು ಪ್ರಕಾರ ದತ್ತು ತೆಗೆದುಕೊಂಡ ನಂತರವೇ ಮನೆಗೆ ಕರೆದುಕೊಂಡು ಬರುತ್ತಿದೆ ಎಂದು ಸೋನು ಹೇಳಿದ್ದಾರೆ.
ಮಗುವನ್ನು ಕಾನೂನು ಬಾಹಿರ, ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡ ಆರೋಪ ಈಗ ಅವರ ಮೇಲಿದೆ.
ಮೂಲಗಳ ಮಾಹಿತಿ ಪ್ರಕಾರ ಮಕ್ಕಳ ರಕ್ಷಣಾ ಕಚೇರಿ ಇಲಾಖೆ ಅಧಿಕಾರಿಗಳು ಹಾಗೂ ಬೆಂಗಳೂರು ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಕಳೆದ ರಾತ್ರಿಯಷ್ಟೇ ಪ್ರಕರಣ ದಾಖಲಾಗಿತ್ತು.
ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಇದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಕಾನೂನು ಪ್ರಕಾರವೇ ದತ್ತು ಪಡೆದುಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಸೋನು ಅಧಿಕಾರಿಗಳ ಮುಂದೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ವಿಚಾರಣೆ ಆರಂಭಿಸಿದ್ದಾರೆ.