ಇಂದು ಮಧ್ಯರಾತ್ರಿಯಿಂದಲೇ ಡೀಸೆಲ್‌ ದರ ಏರಿಕೆ: ಮತ್ತೊಂದು ಶಾಕ್ ನೀಡಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯ ಸರ್ಕಾರದಿಂದ ಜನರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೈಸ್ಪೀಡ್ ಡೀಸೆಲ್ ದರ ಹೆಚ್ಚಳವಾಗಲಿದೆ.

ಪ್ರತಿ ಲೀಟರ್‌ ಡೀಸೆಲ್‌ ಬೆಲೆಯನ್ನು 2 ರೂ. ಏರಿಕೆ ಮಾಡಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುವ ಜನತೆಗೆ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಶಾಕ್‌ ನೀಡಿದಂತಾಗಿದೆ.

ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್‌ ಡೀಸೆಲ್‌ಗೆ 89.79 ರೂ. ದರವಿದೆ. ಈಗ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು 2 ರೂ. ಏರಿಕೆ ಮಾಡಿದ್ದರಿಂದ ದರ 91.79 ರೂ.ಗೆ ಏರಿಕೆಯಾಗಲಿದೆ.ಈ ಹಿಂದೆ 18.44% ಇದ್ದ ತೆರಿಗೆ ಸದ್ಯ 21.17% ಕ್ಕೆ ಏರಿಕೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!