ಡೀಸೆಲ್ ಬೆಲೆ ಏರಿಕೆ: ಇದು ದರಿದ್ರ ಕಾಂಗ್ರೆಸ್ ಸರ್ಕಾರ ಎಂದ ಆರ್.ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಾಲಿನ ದರ ಏರಿಕೆ ಆಯಿತು, ಕಸ ಸಂಗ್ರಹಣ ಮೇಲೆ ಸೆಸ್ ಹಾಕಿದಾಯಿತು. ಈಗ ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದೆ ಈ ದರಿದ್ರ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ಧರಾಮಯ್ಯ ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ, ಬಡವರು, ಮಾಧ್ಯಮ ವರ್ಗದ ರಕ್ತ ಹೀರಲು ಹೊರಟಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

ಹಾಲಿನ ದರ ಏರಿಕೆ, ಕಸ ಸಂಗ್ರಹಣ ಮೇಲೆ ಸೆಸ್ ಹಾಕಿದ್ದಾಯ್ತು, ಈಗ ಏಕಾಏಕಿ ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದೆ ಈ ದರಿದ್ರ ಕಾಂಗ್ರೆಸ್ ಸರ್ಕಾರ. ಡೀಸೆಲ್ ಅಂದರೆ ಅದು ಸರಕು ಸಾಗಾಣಿಕೆಗೆ ಉಪಯೋಗಿಸುವ ಇಂಧನ. ಡೀಸೆಲ್ ಬೆಲೆ ಹೆಚ್ಚಾದರೆ ಹಾಲು, ತರಕಾರಿ, ಹಣ್ಣು, ದಿನಸಿ, ಟ್ಯಾಕ್ಸಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ, ಸೇವೆಗಳ ಬೆಲೆ ಹೆಚ್ಚಾಗುತ್ತವೆ ಎಂದು ಸ್ವಯಂಘೋಷಿತ ಆರ್ಥಿಕ ತಜ್ಞರಾದ ಸಿದ್ದರಾಮಯ್ಯನವರಿಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಾರಿಗೆ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದೆ ಇತ್ತೀಚೆಗಷ್ಟೆ ಬಸ್ ಟಿಕೆಟ್ ದರ ಏರಿಕೆ ಆಗಿತ್ತು. ಈಗ ಡೀಸೆಲ್ ಬೆಲೆ ಏರಿಕೆ ಆಗಿದೆ ಎನ್ನುವ ನೆಪವೊಡ್ಡಿ ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಯಾವ ಯಾವ ವಸ್ತುಗಳ ಮೇಲೆ ತೆರಿಗೆ ಹಾಕಬೇಕು, ಯಾವ ಯಾವ ವಸ್ತುಗಳ ಬೆಲೆ ಏರಿಕೆ ಮಾಡಬೇಕು ಎಂದು ಹೊಂಚು ಹಾಕಿದ್ದೀರಿ ಸಿದ್ದರಾಮಯ್ಯನವರೇ? ಬಡವರು, ಮಧ್ಯಮ ವರ್ಗದ ರಕ್ತ ಹೀರುತ್ತಿರುವ ರಕ್ತಪಿಪಾಸು ಕಾಂಗ್ರೆಸ್ ಸರ್ಕಾರಕ್ಕೆ ಜನರ ಶಾಪ ತಟ್ಟದೇ ಇರದು ಎಂಬುದಾಗಿ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!