ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಇಂಧನ ಲಭ್ಯತೆ ಸಮತೋಲನದಲ್ಲಿರಲು ಹಾಗೂ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ಚಟುವಟಿಕೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಡೀಸೆಲ್ ಮಾರಾಟಕ್ಕೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಒಂದು ವಾಹನಕ್ಕೆ ದಿನಕ್ಕೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ.
ಅಕ್ರಮ ಸಂಗ್ರಹಕ್ಕೆ ಕಡಿವಾಣ
ಹೊಸ ನಿಯಮದ ಪ್ರಕಾರ, ಸಾಮಾನ್ಯ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಅನ್ನು ವಾಹನದ ಟ್ಯಾಂಕ್‌ಗೆ ಮಾತ್ರ ತುಂಬಿಸಬೇಕು. ವಿಶೇಷ ಅನುಮತಿ ಪಡೆದ ಕ್ಯಾನ್‌ಗಳನ್ನು ಹೊರತುಪಡಿಸಿ ಬ್ಯಾರೆಲ್ ಅಥವಾ ಇತರ ಪಾತ್ರೆಗಳಲ್ಲಿ ಡೀಸೆಲ್ ನೀಡುವುದನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ:
ವಾಣಿಜ್ಯ ಬಳಕೆದಾರರಿಗೆ ಪ್ರತ್ಯೇಕ ವ್ಯವಸ್ಥೆ
ಕೈಗಾರಿಕಾ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಹೆಚ್ಚಿನ ಪ್ರಮಾಣದ ಇಂಧನ ಅಗತ್ಯವಿರುವ ಗ್ರಾಹಕರು ಇನ್ನು ಮುಂದೆ ಸಾಮಾನ್ಯ ಪೆಟ್ರೋಲ್ ಬಂಕ್‌ಗಳ ಬದಲಾಗಿ ಬೃಹತ್ ಮಾರಾಟ ಕೇಂದ್ರಗಳಿಂದಲೇ ಡೀಸೆಲ್ ಖರೀದಿಸಬೇಕು ಎಂದು ಕೇಂದ್ರ ಸೂಚಿಸಿದೆ.
ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಪರಿಸ್ಥಿತಿಯಿಂದ ಜಾಗತಿಕ ತೈಲ ಪೂರೈಕೆಯ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.



