ಡೀಸೆಲ್ ಟ್ಯಾಂಕರ್‌ ಪಲ್ಟಿ: ಧಗಧಗ ಹೊತ್ತಿ ಉರಿದ ಬೆಂಕಿ, ಓರ್ವ ಮೃತ್ಯು, 8 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಹರೋಲಿ ಪ್ರದೇಶದ ತಹ್ಲಿವಾಲಾ ಕಸ್ವಾ ಗ್ರಾಮದಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿ ಹೊಡೆದು ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ನಡೆದಿದೆ.

ಬ್ರೇಕ್ ವೈಫಲ್ಯದ ಪರಿಣಾಮವಾಗಿ, ಡೀಸೆಲ್ ಇಂಧನ ಟ್ಯಾಂಕರ್ ಪಲ್ಟಿಯಾಗಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ 15 ಬೀದಿ ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಂತ್ರಸ್ತರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬೆಂಕಿಯ ಪರಿಣಾಮವಾಗಿ, ನಿವಾಸಿಗಳ ಆಸ್ತಿಪಾಸ್ತಿ ನಷ್ಟವಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!