ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಶುರುವಾಗಿದೆ. ರಾಜ್ಯ ಸರ್ಕಾರದಿಂದ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಸಂಬಂಧ ನೊಟೀಸ್ ಜಾರಿಗೊಳಿಸಲಾಗಿದೆ.
ರೇವಣ್ಣಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಲು ಕೋರಿ ಪ್ರಶ್ನಿಸಿ ರಾಜ್ಯ ಸರ್ಕಾರ (ಎಸ್ ಐ ಟಿ) ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನೊಟೀಸ್ ಜಾರಿಗೊಳಿಸಿದೆ.
ಜೊತೆಗೆ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಸರ್ಕಾರಕ್ಕೆ ( ಎಸ್ ಐ ಟಿ )ಗೆ ಹೈಕೋರ್ಟ್ ನೊಟೀಸ್ ಜಾರಿಗೊಳಿಸಿದೆ.