ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಲೋಕಸಭಾ ಚುನಾವಣೆಯ ಸಮಯದಲ್ಲಿ ಸಂಕಷ್ಟವೊಂದು ಎದುರಾಗಿದೆ. ಹೆಚ್ಚುವರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆರಂಭಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಾಗಿತ್ತು. ಇದನ್ನು ಕೆಲ ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ ಸರಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಸಿಬಿಐ ಮತ್ತು ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್, ನ್ಯಾ.ಉಮೇಶ್ ಎಂ. ಅಡಿಗ ಅವರ ನ್ಯಾಯಪೀಠವು ವಿಚಾರಣೆ ಆರಂಭಿಸಿದೆ.