ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡುತ್ತೇವೆ. ನೀನು ಸ್ಟೇ ತಂದಿದ್ರು ತೆರವು ಮಾಡುತ್ತೇವೆ, ನಾನು ಸ್ಟೇ ತಂದಿದ್ರು ತೆರವು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಾಜಕಾಲುವೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. ಯಾರೇ ಒತ್ತುವರಿ ಮಾಡಿ ತಡೆಯಾಜ್ಞೆ ತಂದಿರಬಹುದು. ನಾವು ಕಾನೂನಿನ ಪ್ರಕಾರ ಒತ್ತುವರಿ ಜಾಗವನ್ನು ತೆರವು ಮಾಡುತ್ತೇವೆ. ಯಾರೇ ಆದರೂ ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನೇ ಮಾಡುತ್ತೇವೆ. ನೀನು, ನಾನು ಯಾರೇ ಸ್ಟೇ ತಂದಿದ್ರು ತೆರವು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಟ ದರ್ಶನ್ ಮನೆ ರಾಜಕಾಲುವೆ ಮೇಲೆ ಇದ್ದರೂ ಸಹ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೇ ಇದು ಕೋರ್ಟ್ನಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಸೈಲೆಂಟ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಅಪಸ್ವರ ಹೇಳಿಬಂದಿದ್ದವು. ಇದೀಗ ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಕಾನೂನಿನ ಪ್ರಕಾರ ದರ್ಶನ್ ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ಸರ್ಕಾರದಿಂದ ಮೌಖಿಕ ಸೂಚನೆ ನೀಡಿದ್ದು, ಇದೀಗ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.