ದೆಹಲಿ ಚುನಾವಣೆ ಸಮಯದಲ್ಲಿ ಕೇಜ್ರಿವಾಲ್‌ಗೆ ಸಂಕಷ್ಟ: ಇಡಿ ತನಿಖೆಗೆ ರಾಜ್ಯಪಾಲರ ಸಮ್ಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರಾದ ವಿ.ಕೆ ಸಕ್ಸೆನಾ ಜಾರಿ ನಿರ್ದೇಶನಾಲಯಕ್ಕೆ (ED) ಅನುಮತಿ ನೀಡಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನೆರಡು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.

ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಇದೀಗ ಲೆಫ್ಟಿನೆಂಟ್ ಗವರ್ನರ್ ಅವರು ವಿಚಾರಣೆಗೆ ಅನುಮತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಕೇಜ್ರಿವಾಲ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಆರೋಪದಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು, ಆದರೆ ವಿಚಾರಣೆ ಆರಂಭವಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಅನುಮೋದನೆಯನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದ ನಂತರ, ಇಡಿ ಅನುಮತಿ ಕೋರಿ ಪತ್ರ ಬರೆದಿತ್ತು.

ಕೇಜ್ರಿವಾಲ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮಾಡಿದ ಬಹುದೊಡ್ಡ ಆರೋಪಗಳಲ್ಲಿ ಮದ್ಯ ನೀತಿ ಹಗರಣವೂ ಒಂದಾಗಿದೆ. ಹಗರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಇಡಿ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥರು ಸೆಪ್ಟೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2025ರ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಮರು ಆಯ್ಕೆ ಮಾಡಿದ ಬಳಿಕವೇ ಉನ್ನತ ಹುದ್ದೆಗಳಿಗೆ ಮರಳುವುದಾಗಿ ಪ್ರತಿಜ್ಞೆ ಮಾಡಿದ್ದರು.

ಕೇಜ್ರಿವಾಲ್‌ ಮತ್ತು ಸಿಸೋಡಿಯಾ ಅವರು 100 ಕೋಟಿ ಲಂಚ ಪಡೆಯುವ ಸಲುವಾಗಿ 2021-22ನೇ ಸಾಲಿನ ಅಬಕಾರಿ ನೀತಿಯಲ್ಲಿ ಬದಲಾವಣೆ ತಂದಿದ್ದರು. ಇದರಲ್ಲಿ 45 ಕೋಟಿ ರೂ.ಗಳನ್ನ ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದರು ಎಂಬುದು ಇ.ಡಿ ಆರೋಪ. ಈಗಾಗಲೇ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸಲ್ಲಿಸಿದ ಅರ್ಜಿಗೆ ಉತ್ತರವನ್ನು ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಹೆಚ್ಚುವರಿ ಸಮಯವನ್ನು ನೀಡಿದೆ.

ಕೇಜ್ರಿವಾಲ್‌ ಮತ್ತು ಸಿಸೋಡಿಯಾ ಅವರು 100 ಕೋಟಿ ಲಂಚ ಪಡೆಯುವ ಸಲುವಾಗಿ 2021-22ನೇ ಸಾಲಿನ ಅಬಕಾರಿ ನೀತಿಯಲ್ಲಿ ಬದಲಾವಣೆ ತಂದಿದ್ದರು. ಇದರಲ್ಲಿ 45 ಕೋಟಿ ರೂ.ಗಳನ್ನ ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದರು ಎಂಬುದು ಇ.ಡಿ ಆರೋಪ. ಈಗಾಗಲೇ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಶುಕ್ರವಾರ (ಡಿ.20) ದೆಹಲಿ ಹೈಕೋರ್ಟ್‌ ಇ.ಡಿಗೆ ನೋಟಿಸ್‌ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!