ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು,ಬೆಳೆಗಳ ಉತ್ಪಾದಕತೆ ಹೆಚ್ಚಿಸಲು ಡಿಜಿಟಲ್ ಕೃಷಿಕೇಂದ್ರ ಆರಂಭ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
5 ಕಿರು ಆಹಾರ ಸಂಸ್ಕರಣ ಘಟಕ ಸ್ಥಾಪನೆ, 12 ಸಾವಿರ ಕೃಷಿ ಹೊಂಡ ನಿರ್ಮಾಣಕ್ಕೆ ಅನುದಾನ, ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಆರಂಭ, 58 ಕೃಷಿ ಪ್ರಯೋಗಾಲಯಗಳ ಬಲವರ್ಧನೆ ಹಾಗೂ ಜೊಯಿಡಾ ತಾಲೂಕು ಅನ್ನು ರಾಜ್ಯದ ಪ್ರಥಮ ಸಾವಯುವ ತಾಲೂಕನ್ನಾಗಿ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.