ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ಜನಗಣತಿ: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಜನಗಣತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇತ್ತೀಚೆಗೆ ದೇಶದಲ್ಲಿ ಜನಗಣತಿಗೆ ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳು ಬಂದಿದ್ದವು. ಜನಗಣತಿ ಕುರಿತು ಪ್ರಶ್ನೆಯನ್ನು ಕೇಳಿದಾಗ, ನಾವು ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದು ಶಾ ಹೇಳಿದರು. ಆದರೆ, ಯಾವ ನಡೆಸಲಾಗುತ್ತದೆ ಎಂಬುದಕ್ಕೆ ಸ್ಪಷ್ಟನೆ ನೀಡಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ಕುರಿತು ಸುದ್ದಿಗೋಷ್ಠಿಯಲ್ಲಿ ಅಮಿತ್ ಶಾ ಅವರು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಭಾಗವಹಿಸಿದರು. ಈ ವೇಳೆ ಅವರು ಜಾತಿ ಆಧಾರಿತ ಜನಗಣತಿಯ ಬಗ್ಗೆಯೂ ಮಾತನಾಡಿದರು. ಜನಗಣತಿಯನ್ನು ಘೋಷಿಸಿದಾಗ, ನಾವು ಎಲ್ಲಾ ಮಾಹಿತಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಅವರು ಹೇಳಿದರು.

ಭಾರತದಲ್ಲಿ 1881ರಿಂದ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ. ಈ ದಶವಾರ್ಷಿಕ ಜನಗಣತಿಯ ಮೊದಲ ಹಂತವು ಏಪ್ರಿಲ್ 1, 2020ರಂದು ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅದನ್ನು ಮುಂದೂಡಬೇಕಾಯಿತು ಎಂದರು.

ಸಂಪೂರ್ಣ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆಗೆ ಸರ್ಕಾರವು 12,000 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದ್ದು, ಈ ಮೂಲಕ ನಾಗರಿಕರು ತಮ್ಮನ್ನು ತಾವು ಎಣಿಸುವ ಅವಕಾಶವನ್ನು ಪಡೆಯುತ್ತಾರೆ. ಇದಕ್ಕಾಗಿ ಜನಗಣತಿ ಪ್ರಾಧಿಕಾರವು ಸ್ವಯಂ ಗಣತಿ ಪೋರ್ಟಲ್ ಸಿದ್ಧಪಡಿಸಿದ್ದು, ಇನ್ನೂ ಬಿಡುಗಡೆ ಮಾಡಿಲ್ಲ. ಸ್ವಯಂ-ಎಣಿಕೆಯ ಸಮಯದಲ್ಲಿ ಆಧಾರ್ ಅಥವಾ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!