ದಾಖಲೆಯ ಮೊತ್ತದಲ್ಲಿ ‘ಕಾಂತಾರ’ ಚಿತ್ರದ ಡಿಜಿಟಲ್ ರೈಟ್ಸ್ ಸೇಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ‘ಕಾಂತಾರ’ ಚಿತ್ರದ ಡಿಜಿಟಲ್ ರೈಟ್ಸ್ 125 ಕೋಟಿ ರೂಪಾಯಿಗೆ ಅಮೆಜಾನ್ ಪ್ರೈಮ್ ವೀಡಿಯೋ ಕಂಪನಿಗೆ ಸೇಲ್‌ ಆಗಿದೆ.

ಕೇವಲ 15-16 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಂತಾರ ಚಿತ್ರವು 125 ಕೋಟಿ ರೂ.ಗೆ ಸೇಲ್ ಆಗಿದ್ದು ಅಚ್ಚರಿ ಹುಟ್ಟಿಸುವ ಸಂಗತಿ. ಜತೆಗೆ, ಕಾಂತಾರ ಚಿತ್ರದ ಬಿಡುಗಡೆಯಿಂದ ಜಗತ್ತಿನಾದ್ಯಂತ 500 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿದೆ.

ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಜೋಡಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಕಾಂತಾರ ಚಿತ್ರವು ಈ ಮೂಲಕ ಇದೀಗ ಮತ್ತೊಂದು ಮನ್ನಣೆಗೆ ಪಾತ್ರವಾಗಿದೆ.

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರವು ‘ದೈವಾರಾಧನೆ’ಗೆ ಸಂಬಂಧಿಸಿದ ವಿಷಯವನ್ನು ಒಳಗೊಂಡಿದೆ. ಈ ಚಿತ್ರವು ತನ್ನ ವಿಭಿನ್ನತೆ ಹಾಗು ಘನತೆಯಿಂದ ಅಪಾರ ಜನಮನ್ನಣೆ ಪಡೆದಿದೆ. ಈ ಚಿತ್ರವು ಕಡಿಮೆ ಬಜೆಟ್ ಹಾಗೂ ಹೆಚ್ಚಿನ ಗಳಿಕ ಮೂಲಕ ಇಡೀ ಜಗತ್ತಿನ ಗಮನವನ್ನು ಸೆಳೆದಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರು ಕಾಂತಾರ ಚಿತ್ರದ ಮೂಲಕ ಇಂಟರ್‌ನ್ಯಾಷನಲ್ ಖ್ಯಾತಿ ಪಡೆದುಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!