Saturday, April 1, 2023

Latest Posts

ಭಾರತದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ನಗದು ವಹಿವಾಟನ್ನು ಮೀರಲಿದೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ದೇಶದಲ್ಲಿ ಹೆಚ್ಚು ಆದ್ಯತೆಯ ಪಾವತಿ ಕಾರ್ಯವಿಧಾನವಾಗುತ್ತಿರುವುದರಿಂದ ಡಿಜಿಟಲ್ ವಹಿವಾಟು ಶೀಘ್ರದಲ್ಲೇ ನಗದು ವಹಿವಾಟನ್ನು ಮೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭರವಸೆ ವ್ಯಕ್ತಪಡಿಸಿದ್ದಾರೆ.

ಭಾರತದ ಡಿಜಿಟಲ್‌ ಪಾವತಿ ವಿಧಾನ ಯುಪಿಐ ಮತ್ತು ಸಿಂಗಾಪುರದ ಪೇನೌ ನಡುವಿನ ಗಡಿಯಾಚೆಗಿನ ಸಂಪರ್ಕಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಮೋದಿಯವರು, 2022 ರಲ್ಲಿ ಯುಪಿಐ ಮೂಲಕ ಸುಮಾರು 74 ಶತಕೋಟಿ ವಹಿವಾಟುಗಳನ್ನು ನಡೆಸಲಾಗಿದೆ ಎಂದು ಹೇಳಿದರು.

“ಅನೇಕ ತಜ್ಞರು ಶೀಘ್ರದಲ್ಲೇ ಭಾರತದ ಡಿಜಿಟಲ್ ವ್ಯಾಲೆಟ್ ವಹಿವಾಟುಗಳು ನಗದು ವಹಿವಾಟುಗಳನ್ನು ಹಿಂದಿಕ್ಕಲಿವೆ ಎಂದು ಅಂದಾಜಿಸಿದ್ದಾರೆ” ಎಂದು ಅವರು ಹೇಳಿದರು.
ಯುಪಿಐ ಮೂಲಕ ಹೆಚ್ಚಿನ ಸಂಖ್ಯೆಯ ವಹಿವಾಟುಗಳು ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಪಾವತಿ ವ್ಯವಸ್ಥೆಯು ಅತ್ಯಂತ ಸುರಕ್ಷಿತವಾಗಿದೆ ಎಂದು ತೋರಿಸುತ್ತದೆ ಎಂದು ಅವರು ತಿಳಿಸಿದರು.

ಮೋದಿ ಅವರು ತಮ್ಮ ಸಿಂಗಾಪುರದ ಸಹವರ್ತಿ ಲೀ ಸಿಯೆನ್ ಲೂಂಗ್ ಅವರೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಯುಪಿಐ ಮತ್ತು ಸಿಂಗಾಪುರದ ಪೇನೌ ನಡುವಿನ ಗಡಿಯಾಚೆಗಿನ ಸಂಪರ್ಕಕ್ಕೆ ಚಾಲನೆ ನೀಡಿದರು.

ಮೊದಲ ವಹಿವಾಟನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರದ ಹಣಕಾಸು ಪ್ರಾಧಿಕಾರ (MAS) ವ್ಯವಸ್ಥಾಪಕ ನಿರ್ದೇಶಕ ರವಿ ಮೆನನ್ ಮಾಡಿದರು.

ಈ ಎರಡು ಪಾವತಿ ವ್ಯವಸ್ಥೆಗಳ ಸಂಪರ್ಕವು ಎರಡೂ ದೇಶಗಳ ನಿವಾಸಿಗಳಿಗೆ ಗಡಿಯಾಚೆಗಿನ ಹಣ ರವಾನೆಯನ್ನು ವೇಗವಾಗಿ ಮತ್ತು ವೆಚ್ಚ-ಪರಿಣಾಮಕಾರಿಯಾಗಿ ವರ್ಗಾಯಿಸಲು ಅನುಕೂಲ ಮಾಡಿಕೊಡುತ್ತದೆ. ಇದು ಸಿಂಗಾಪುರದಲ್ಲಿರುವ ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ, ಸಿಂಗಾಪುರದಿಂದ ಭಾರತಕ್ಕೆ ತ್ವರಿತ ಮತ್ತು ಕಡಿಮೆ-ವೆಚ್ಚದ ಹಣವನ್ನು ವರ್ಗಾವಣೆ ಮಾಡಲು ಸಹಾಯ ಮಾಡುತ್ತದೆ.

ಫಿನ್‌ಟೆಕ್ ನಾವೀನ್ಯತೆಗಾಗಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪರಿಸರ ವ್ಯವಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಯುಪಿಐ ಪ್ರಯೋಜನಗಳು ಭಾರತಕ್ಕೆ ಮಾತ್ರ ಸೀಮಿತವಾಗಿರದೆ ಇತರ ದೇಶಗಳಿಗೂ ವಿಸ್ತರಿಸಲಾಗುವುದು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!