ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಒಕ್ಕಲಿಗ ಸಂಪ್ರದಾಯದಂತೆಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಣರು ಎಸ್.ಎಂ.ಕೃಷ್ಣ ಪಾರ್ಥಿವ ಶರೀರಕ್ಕೆಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕಣ್ಣೀರಿಟ್ಟರು.