ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ರೇಸ್‌ ನಲ್ಲಿ ದಿಗ್ವಿಜಯ್‌ ಸಿಂಗ್‌ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಾಂಗ್ರೆಸ್‌ ನ ಮುಂಬರುವ ಅಧ್ಯಕ್ಷೀಯ ಚುನಾವಣೆಯು ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು ಇದೀಗ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಾವರೂ ಕೂಡ ಅಧ್ಯಕ್ಷ ಸ್ಥಾನದ ರೇಸ್‌ ನಲ್ಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಇಂದು ರಾತ್ರಿ ದೆಹಲಿಗೆ ಮರಳಲಿರುವ ದಿಗ್ವಿಜಯ ಸಿಂಗ್ ಸೆಪ್ಟೆಂಬರ್ 30 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಂಡಾಯದ ನಂತರ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುವ ಕುರಿತು ಅನುಮಾನಗಳು ಹುಟ್ಟಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿದ್ದು ದಿಗ್ವಿಜಯ ಸಿಂಗ್, ಕೆಸಿ ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ.

ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂಬ ನಿರ್ಧಾರಕ್ಕೆ ರಾಹುಲ್ ಗಾಂಧಿ ದೃಢವಾಗಿ ಉಳಿದಿದ್ದಾರೆ. 2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಸತತ ಎರಡನೇ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ, ಜಿ -23 ಎಂದು ಉಲ್ಲೇಖಿಸಲಾದ ನಾಯಕರ ಒಂದು ವಿಭಾಗದ ಬಹಿರಂಗ ಬಂಡಾಯದ ನಂತರ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ ಸಿಡಬ್ಲ್ಯೂಸಿ ಅವರನ್ನು ಮುಂದುವರಿಸಲು ಒತ್ತಾಯಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!