ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಡಿಕೆಶಿ: ಮನೆ ಗೇಟ್‌ಗೆ ನೋಟಿಸ್ ಅಂಟಿಸಿದ ಅಧಿಕಾರಿಗಳು

ದಿಗಂತ ವರದಿ ರಾಮನಗರ :

ರಾಜ್ಯದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಎಸಿ, ಡಿವೈಎಸ್ ಪಿ ಭೇಟಿ ನೀಡಿ ಪಾದಯಾತ್ರೆ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ.
ಕನಕಪುರದ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ್ದ ಎಸಿ, ಡಿವೈಎಸ್ ಪಿ ನೋಟಿಸ್ ನೀಡಿದ್ದಾರೆ. ಆದರೆ ನೋಟಿಸ್ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.
ಡಿ.ಕೆ. ಶಿವಕುಮಾರ್ ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎಸಿ ಮತ್ತು ಡಿವೈಎಸ್ ಪಿ ಮನೆಯ ಗೇಟ್ ಗೆ ನೋಟಿಸ್ ಅಂಟಿಸಿ ಬಂದಿದ್ದಾರೆ ಎಂದು ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!