ಡಿಕೆಶಿ ಟೆಂಪಲ್ ರನ್.. ಮಡಿಕೇರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ 

ಹೊಸದಿಗಂತ ಮಡಿಕೇರಿ:

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನಲ್ಲೆಡೆ ಆಯುಧ ಪೂಜೆ ಹಾಗೂ ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ತಾಯಿ ಕಾವೇರಿ ಮಾತೆ ಎಲ್ಲರಿಗೂ ಸಮೃದ್ಧಿ ತರುವಂತಾಗಲಿ ಎಂದು ಉಪ ಮುಖ್ಯಮಂತ್ರಿ ಅವರು ಪ್ರಾರ್ಥಿಸಿದರು.

ನಾಡಿನಲ್ಲಿ ಹಿಂದಿನಿಂದಲೂ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಬರಲಾಗಿದೆ. ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿದ್ದು ಎಲ್ಲರಲ್ಲಿ ಸಂತಸ ತಂದಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು‌.

ನಗರದ ಶಕ್ತಿ ದೇವತೆಗಳಾದ ಕುಂದೂರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಶ್ರೀ ಕೋಟೆ ಗಣಪತಿ, ಪೇಟೆ ಶ್ರೀ ರಾಮಮಂದಿರ, ಶ್ರೀ ಕೊದಂಡರಾಮ ದೇವಾಲಯ, ಶ್ರೀ ಮುತ್ತಪ್ಪ ದೇವಾಲಯ, ಕರವಲೆ ಭಗವತಿ ದೇವಾಲಯ, ಶ್ರೀ ಚೌಡೇಶ್ವರಿ ದೇವಾಲಯ, ವಿಜಯ ವಿನಾಯಕ, ದೇಚೂರು ಶ್ರೀರಾಮ ಮಂದಿರ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷ ಪ್ರಕಾಶ್ ಆಚಾರ್ಯ, ದಶಮಂಟಪ ಸಮಿತಿ ಅಧ್ಯಕ್ಷ ಜಗದೀಶ್ ಪ್ರಮುಖರಾದ ಟಿ.ಪಿ.ರಮೇಶ್, ಕೆ.ಪಿ.ಚಂದ್ರಕಲಾ, ಎಚ್.ಎಸ್.ಚಂದ್ರಮೌಳಿ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!