ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮುಂದಿನ ತಿಂಗಳು ನಡೆಯಲಿರುವ ಶ್ರೀಲಂಕಾ – ಭಾರತ ಏಕದಿನ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಭಾರತ ತಂಡಕ್ಕೆ ಮತ್ತಿಬ್ಬರು ತರಬೇತುದಾರರನ್ನು ನೇಮಿಸಲಾಗಿದೆ.
ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜತೆಗೆ ಟಿ. ದಿಲೀಪ್ ಮತ್ತು ಪಾರಸ್ ಮಾಂಬ್ರೆ ಅವರನ್ನು ಆಯ್ಕೆ ಮಾಡಲಾಗಿದ್ದು, ಟಿ. ದಿಲೀಪ್ ಫೀಲ್ಡಿಂಗ್ ಮತ್ತು ಪಾರಸ್ ಮಾಂಬ್ರೆ ಬೌಲಿಂಗ್ ಕೋಚ್ ಆಗಿರುತ್ತಾರೆ.
ಈಗಾಗಲೇ ಬಿಸಿಸಿಐ ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡ ಒಟ್ಟು 20 ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಿದೆ.
ಜೂನ್ 28ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡ, ಕೊಲಂಬಿದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಜುಲೈ- 13,16, 18 ರಂದು ಏಕದಿನ ಮತ್ತು ಜುಲೈ-21,23,25 ರಂದು ಟಿ20 ಪಂದ್ಯ ಆಡಲಿದೆ.