Saturday, December 9, 2023

Latest Posts

ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ಡಿಂಪಲ್‌ ಕ್ವೀನ್ ನಟಿ ರಚಿತಾ ರಾಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್‌ನ ಡಿಂಪಲ್ ಬೆಡಗಿ ಎಂದೇ‌ ಖ್ಯಾತರಾದ ‌ನಟಿ ರಚಿತಾ ರಾಮ್ ಇಂದು ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

‘ನನ್ನ ಸ್ನೇಹಿತರು ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯದಿಂದ‌ ಕೂಡಿದ್ದು, ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ’ ಎಂದು ರಚಿತಾರಾಮ್ ಹೇಳಿದರು.

ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!