Monday, August 8, 2022

Latest Posts

ಚುನಾವಣೆ ಪಟ್ಟಿಯಲ್ಲಿ ಹೆಸರಿಲ್ಲ: ಟಿಎಂಸಿ ತೊರೆದು ಬಿಜೆಪಿ ಸೇರಿದ ದಿನೇಶ್​ ಬಜಾಜ್​

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಾ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರ ನಡುವೆ ರಾಜೀನಾಮೆ ಪರ್ವವೂ ಒಂದು ಕಡೆಯಿಂದ ನಡೆಯುತ್ತಿದೆ. ಇದೀಗ ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಮುಖಂಡರು ಪಕ್ಷವನ್ನು ತೊರೆದು ಬಿಜೆಪಿಯತ್ತ ಬರುತ್ತಿದ್ದಾರೆ.
ಟಿಎಂಸಿ ನಾಯಕ ದಿನೇಶ್​ ಬಜಾಜ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಟಿಎಂಸಿ ನಿನ್ನೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಲಿಸ್ಟ್​ನಲ್ಲಿ ತಮ್ಮ ಹೆಸರಿಲ್ಲದ ಕಾರಣ ಬಜಾಜ್​ ಈ ನಿರ್ಧಾರಕ್ಕೆ ಬಂದಿದ್ದಾರೆ.
ರಾಜೀನಾಮೆ ನೀಡಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸಂದೇಶ ನೀಡಿರುವ ದಿನೇಶ್​ ಬಜಾಜ್, ತೃಣಮೂಲ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಸ್ಥಾನಗಳಿಂದ ನನ್ನನ್ನು ಮುಕ್ತಗೊಳಿಸಿ ರಾಜೀನಾಮೆಯನ್ನು ಸ್ವೀಕರಿಸಿ. 2006 ರಿಂದ 2011 ರವರೆಗೆ ಶಾಸಕನಾಗಿ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದಕ್ಕಾಗಿ ನಾನು ನಿಮಗೆ ಕೃತಜ್ಞನಾಗಿದ್ದೇನೆ.
ನಾನು ಬಿಜೆಪಿಗೆ ಸೇರುತ್ತೇನೆ. ಬಿಜೆಪಿ ನನ್ನನ್ನು ಚುನಾವಣೆಗೆ ತನ್ನ ಅಭ್ಯರ್ಥಿ ಎಂದು ಘೋಷಿಸಿದರೆ, ಬಿಜೆಪಿ ಗೆಲುವು ಖಚಿತ. ಜನರಿಗೆ ನನ್ನ ಬಗ್ಗೆ ಗೊತ್ತು, ನಾನು ಮಾಡಿದ ಕೆಲಸಕ್ಕಾಗಿ ನನಗೆ ಮತ ಹಾಕುತ್ತಾರೆ ಎಂದು ಬಜಾಜ್​​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss