ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತಂಜಲಿಯ ಎಲ್ಲ ಉತ್ಪನ್ನಗಳ ಪರಿಶೀಲನೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.
ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.