ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಮೇಶ್ ಜಾರಕಿಹೊಳಿ ಸಿಡಿ ಬಯಲು ಮಾಡಿದ್ದ ಮತ್ತು ಸಂತ್ರಸ್ತೆಯ ಪರವಾಗಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇಂದು ಪೊಲೀಸ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಸೂಕ್ತ ಭದ್ರತೆ ಇಲ್ಲದ ಕಾರಣ ವಿಚಾರಣೆ ಹಾಜರಾಗಲಿಲ್ಲ.
ಇಂದು ದಿನೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು, ಈ ದಿನ ವಿಚಾರಣೆಗೆ ಬರಲ್ಲ, ಮಾ. 9ರಂದು ಬರುತ್ತೇನೆ ಎಂದು ಪೊಲೀಸ್ ಅಧಿಕಾರಿಗೆ ದಿನೇಶ್ ಪತ್ರ ಬರೆದಿದ್ದಾರೆ.
ಜಾರಕಿಹೊಳಿ ಸಿಡಿ ಬಯಲು ಮಾಡಿರುವ ಕಾರಣ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಹಾಗಾಗಿ ಸೂಕ್ತ ಭದ್ರತೆ ಬೇಕಾಗಿದೆ. ಹೀಗಾಗಿ ವಿಚಾರಣೆಗೆ ಇಂದು ಹಾಜರಾಗಲು ಸಾಧ್ಯವಾಗಿಲ್ಲ. ಮಾರ್ಚ್.9ರಂದು ಬರುತ್ತೇನೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ದೂರವಾಣಿ ಮೂಲಕವೂ ಪೊಲೀಸರೊಂದಿಗೆ ಮಾತನಾಡಿದ್ದಾರೆ.