ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಹಾಗೂ ಆರ್‌ಸಿಬಿಯ ಸ್ಟಾರ್ ಪ್ಲೇಯರ್ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಶನಿವಾರ ವಿದಾಯ ಘೋಷಣೆ ಮಾಡಿದ್ದಾರೆ.
ಈ ಕುರಿತಾದ ಮಾಹಿತಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
“ನಾನು ಅಧಿಕೃತವಾಗಿ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ ಮತ್ತು ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಸಿದ್ಧನಾಗಿರುವಾಗ, ಆಟದ ದಿನಗಳನ್ನು ನನ್ನ ಹಿಂದೆ ಇಡುತ್ತೇನೆ” ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ.
ಆರ್‌ಸಿಬಿ ಪರವಾಗಿ ಪ್ಲೇಆಫ್‌ನಲ್ಲಿ ಆಡಿದ ಬೆನ್ನಲ್ಲಿಯೇ ಅವರು ನಿವೃತ್ತಿಯಾಗುತ್ತಾರೆ ಎನ್ನಲಾಗಿತ್ತು. ಶನಿವಾರ ಇವರು ಅಧಿಕೃತವಾಗಿ ಇದನ್ನು ಘೋಷಣೆ ಮಾಡಿದ್ದಾರೆ.
ಐಪಿಎಲ್ ಮಾತ್ರವಲ್ಲ ಎಲ್ಲಾ ಮಾದರಿಯ ಕ್ರಿಕೆಟ್‌ಗೂ ಅವರು ವಿದಾಯ ಹೇಳಿದ್ದಾರೆ.
‘ಕಳೆದ ಕೆಲವು ದಿನಗಳಿಂದ ಸಾಕಷ್ಟು ಯೋಚನೆ ಮಾಡಿದ ಬಳಿಕ, ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಬೇಕು ಎಂದು ನಿರ್ಧಾರ ಮಾಡಿದ್ದೆ. ಈಗ ಅದನ್ನೇ ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದು, ನನ್ನ ಆಟದ ದಿನಗಳನ್ನು ಹಿಂದೆ ಇಡಲು ಬಯಸಿದ್ದು, ಮುಂದಿನ ಸವಾಲುಗಳಿಗೆ ಸಿದ್ಧವಾಗಿದ್ದೇನೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. RCB vs RR ನಡುವಿನ ಐಪಿಎಲ್ ಎಲಿಮಿನೇಟರ್ ಸ್ಪರ್ಧಾತ್ಮಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ತಮಿಳುನಾಡು ಕ್ರಿಕೆಟಿಗನ ಕೊನೆಯ ಪಂದ್ಯ ಎನಿಸಿಕೊಂಡಿತು. ಅದರೊಂದಿಗೆ ಅವರ ಎರಡು ದಶಕಗಳ ಕಾಲ ವೃತ್ತಿಜೀವನ ಇದರೊಂದಿಗೆ ಅಂತ್ಯಗೊಂಡಿತು.ಈ ಹಂತದಲ್ಲಿ ನನ್ನೆಲ್ಲಾ ಕೋಚ್‌ಗಳು, ನಾಯಕರು, ಆಯ್ಕೆಗಾರರು, ಸಹ ಆಟಗಾರರು ಹಾಗೂ ತಂಡದ ಸಿಬ್ಬಂದಿಗೆ ಈ ಸುದೀರ್ಘ ಪ್ರಯಾಣ ಸಂತೋಷದಿಂದ ಇರುವಂತೆ ನೋಡಿಕೊಂಡಿದ್ದಕ್ಕಾಗಿ ಥ್ಯಾಂಕ್ಸ್ ಹೇಳುತ್ತೇನೆ. ದೇಶದಲ್ಲಿ ಕೋಟ್ಯಂತರ ಮಂದಿ ಕ್ರಿಕೆಟ್ ಆಡುತ್ತಾರೆ. ಆದರೆ, ದೇಶವನ್ನು ಪ್ರತಿನಿಧಿಸುವ ಅವಕಾಶ ನನಗೆ ಸಿಕ್ಕಿದ್ದಕ್ಕೆ ನಾನು ಬಹಳ ಅದೃಷ್ಟವಂತ ಎಂದು ಭಾವಿಸುತ್ತೇನೆ’ ಎಂದು ಹೇಳಿದ್ದಾರೆ.