Sunday, December 10, 2023

Latest Posts

ಟೀಂ ಇಂಡಿಯಾಕ್ಕೆ ದಿನೇಶ್ ಕಾರ್ತಿಕ್ ವಿದಾಯ?: ಹೀಗೊಂದು ಹೇಳುತ್ತಿದೆ ಈ ಪೋಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಹಲವು ವರ್ಷಗಳ ಬಳಿಕ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದೂ, ಕಳೆದ ಟಿ20 ವಿಶ್ವಕಪ್​ಗೆ ಸ್ಥಾನ ಗಿಟ್ಟಿಸಿಕೊಂಡಿದ್ದರು.

ಆದರೆ ಇದೀಗ ತಮ್ಮ ವೃತ್ತಿ ಬದುಕಿನ ಅಂತಿಮ ದಿನಗಳನ್ನು ಎಣಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಟಿ20 ವಿಶ್ವಕಪ್​ಗೆ ಗೇಮ್ ಫಿನಿಶರ್ ಆಗಿ ಆಯ್ಕೆಯಾಗಿದ್ದ ದಿನೇಶ್ ,ಹೇಳುವಂತಹ ಪ್ರದರ್ಶನ ನೀಡಿಲ್ಲ.

ಇದೀಗ ವಿಶ್ವಕಪ್​ನಿಂದ ಬರಿಗೈಯಲ್ಲಿ ವಾಪಸ್ಸಾಗಿರುವ ಕಾರ್ತಿಕ್ ಬುಧವಾರ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ತಮ್ಮ ವಿದಾಯದ ಮುನ್ಸೂಚನೆ ನೀಡಿದ್ದಾರೆ.

ಈ ಪೋಸ್ಟ್‌ನಲ್ಲಿ ನಿವೃತ್ತಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಇಲ್ಲದಿದ್ದರೂ ಅಭಿಮಾನಿಗಳಿಗೆ ನಿವೃತ್ತಿಯ ಸೂಚನೆ ಎಂಬುದು ಅರ್ಥವಾಗಿದೆ.

ಕಾರ್ತಿಕ್ ಅವರು ತಮ್ಮ ತಂಡದ ಆಟಗಾರರೊಂದಿಗೆ, ಕುಟುಂಬದೊಂದಿಗೆ ಮತ್ತು ಮೈದಾನದಲ್ಲಿ ಆಡುತ್ತಿರುವ ಫೋಟೋಗಳನ್ನು ಒಳಗೊಂಡಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಿದ್ದು ಹೆಮ್ಮೆಯ ಸಂಗತಿ. ನಾವು ಪಂದ್ಯಾವಳಿಯನ್ನು ಗೆದ್ದಿಲ್ಲದಿರಬಹುದು ಆದರೆ ನೆನಪುಗಳು ಯಾವಾಗಲೂ ನನ್ನನ್ನು ಸಂತೋಷಪಡಿಸುತ್ತವೆ. ನನ್ನನ್ನು ಸದಾ ಬೆಂಬಲಿಸುತ್ತಿರುವ ನನ್ನ ಸಹ ಆಟಗಾರರು, ತರಬೇತುದಾರರು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

https://www.instagram.com/dk00019/?utm_source=ig_embed&ig_rid=c313ee35-d85f-4c1c-aa99-a6e71608b21a

2004 ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ ದಿನೇಶ್ ಕಾರ್ತಿಕ್, 2007 ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಆ ಬಳಿಕ ತಂಡದ ನಾಯಕ ಹಾಗೂ ಖಾಯಂ ವಿಕೆಟ್ ಕೀಪರ್ ಆಗಿ ಧೋನಿ ಇದ್ದಿದ್ದರಿಂದ ಕಾರ್ತಿಕ್​ಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಆದಾಗ್ಯೂ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಿದ್ದ ಕಾರ್ತಿಕ್, ಟೀಂ ಇಂಡಿಯಾಕ್ಕೆ ಮತ್ತೊಮ್ಮೆ ಭರ್ಜರಿ ಎಂಟ್ರಿಕೊಟ್ಟಿದ್ದರು. ಹಾಗೆಯೇ 2019 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್​ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!