ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಏಶ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಡಿಂಗ್ಕೋ ಸಿಂಗ್ ನಿಧನರಾಗಿದ್ದಾರೆ.
ಲಿವರ್ ಕ್ಯಾನ್ಸರ್ನಿಂದ ಡಿಂಗ್ಕೋ ಅವರು ಬಳಲುತ್ತಿದ್ದರು. 1998 ರ ಬ್ಯಾಂಕಾಂಕ್ ಏಶ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಪಡೆದಿದ್ದ ಡಿಂಗ್ಕೋ ಅವರ ನಿಧನಕ್ಕೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರು ಸಂತಾಪ ಸೂಚಿಸಿದ್ದಾರೆ. ಮಣಿಪುರದ ಡಿಂಗ್ಕೋ ಅವರು 2017 ರಿಂದ ಲಿವರ್ ಕ್ಯಾನ್ಸರ್ನೊಂದಿಗೆ ಹೋರಾಡುತ್ತಿದ್ದರು. ಕಳೆದ ವರ್ಷ ಕೋವಿಡ್ ಸೋಂಕಿಗೆ ಕೂಡ ತುತ್ತಾಗಿದ್ದರು. ಡಿಂಗ್ಕೋ ಅವರಿಗೆ ಅರ್ಜುನ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ದೊರೆತಿದೆ.